ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ
ಕಾರ್ಯಗಾರ
ಬೀದರ ಅಕ್ಟೋಬರ್ 15 (ಕರ್ನಾಟಕ ವಾರ್ತೆ) ಈಶಾನ್ಯ ಕರ್ನಾಟಕ
ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ
ನಿಯೋಜನೆಗೊಂಡಿರುವ ಅಧಿಕಾರಿಗಳು ಮತದಾನ ದಿನದಂದು
ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಬೇಕು ಹಾಗೂ ಮತದಾನ
ಕಾರ್ಯವು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು
ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ
ರಾಮಚಂದ್ರನ್ ಆರ್. ಅವರು ಮತಗಟ್ಟೆ ಅಧಿಕಾರಿಗಳಿಗೆ
ಸೂಚಿಸಿದರು.
ಈಶಾನ್ಯಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾರ್ಯಕ್ಕೆ
ನಿಯೋಜನೆಗೊಂಡಿದ್ದ ಅಧಿಕಾರಿಗಳಿಗೆ ನಗರದ ಪೂಜ್ಯ
ಡಾ.ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ
ಅಕ್ಟೋಬರ್ 15ರಂದು ಮತಗಟ್ಟೆ ಅಧಿಕಾರಿಗಳಿಗೆ ನಡೆದ
ತರಬೇತಿ ಕಾರ್ಯಗಾರ ಉದ್ದೇಶಿಸಿ ಅವರು ಮಾತನಾಡಿದರು.
ಮತದಾನ ದಿನದಂದು ಕೊವಿಡ್-19 ಮಾರ್ಗಸೂಚಿಯನ್ವಯ
ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಪಿಆರ್‍ಓ ಹಾಗೂ ಎಪಿಆರ್‍ಓ
ಇನ್ನೀತರ ಅಧಿಕಾರಿಗಳು ಕಡ್ಡಾಯ ಮಾಸ್ಕಗಳನ್ನು ಧರಿಸಿ,
ಸ್ಯಾನಿಟೈಸರ್ ಬಳಸಿ ಕಾರ್ಯ ನಿರ್ವಹಿಸಬೇಕು. ಮತದಾನ
ಕೇಂದ್ರಕ್ಕೆ ಬರುವ ಮತದಾರರಿಗೆ ಕಡ್ಡಾಯ ತಪಾಸಣೆ ನಡೆಸಿ
ಮತಗಟ್ಟೆಯೊಳಗೆ ಪ್ರವೇಶಿಸುವಂತೆ ನೋಡಿಕೊಳ್ಳಬೇಕು
ಎಂದು ತಿಳಿಸಿದರು.
ಮಾಸ್ಟರ್ ಟ್ರೇನರ್ ಡಾ.ಗೌತಮ ಅರಳಿ ಅವರು ಮಾತನಾಡಿ,
ಮತದಾನ ಕೇಂದ್ರದಲ್ಲಿ ನಿರ್ವಹಿಸುವ ಕಾರ್ಯ ವಿಧಾನಗಳ ಬಗ್ಗೆ
ಮತಗಟ್ಟೆ ಅಧಿಕಾರಿಗಳಿಗೆ ವಿವರವಾಗಿ ತಿಳಿಸಿದರು.1
ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದ ಅಧಿಕಾರಿಗಳಿಗೆ ಇದೇ
ಸಂದರ್ಭದಲ್ಲಿ ಬ್ಯಾಲೆಟ್ ಬಾಕ್ಸ್ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ
ನೀಡಲಾಯಿತು.
ಕಾರ್ಯಗಾರದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ರುದ್ರೇಶ ಘಾಳಿ,
ಸಹಾಯಕ ಆಯುಕ್ತರಾದ ಗರೀಮಾ ಪನ್ವಾರ, ತಹಸೀಲ್ದಾರರಾದ
ಗಂಗಾದೇವಿ, ಮಾಸ್ಟರ್ ಟ್ರೇನರ್ ರಮೇಶ ಮಠಪತಿ ಸೇರಿದಂತೆ
ಮತಗಟ್ಟೆ ಅಧಿಕಾರಿಗಳು, ಚುನಾವಣಾ ಕಚೇರಿಯ ಸಿಬ್ಬಂದಿ
ಉಪಸ್ಥಿತರಿದ್ದರು.





No comments:
Post a Comment