ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ತಹಸೀಲ್ದಾರರು ಕಾಲಕಾಲಕ್ಕೆ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಪೌತಿ ವಾರಸಾ ವಹಿವಾಟುಗಳ ಆಂದೋಲನದ ನೇತೃತ್ವ ವಹಿಸಿ ಕಾರ್ಯನಿರ್ವಹಿಸಬೇಕು. ರೈತಾಪಿ ವರ್ಗದವರ ಸಮಸ್ಯೆಗಳನ್ನು ಪರಿಹರಿಸಿ ಪೌತಿ ವಾರಸಾ ಸ್ವರೂಪದ ಮ್ಯುಟೇಶನ್ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಿ, ಪೌತಿ ವಾರಸಾ ಆಂದೋಲವನ್ನು ಹಮ್ಮಿಕೊಳ್ಳುವ ದಿನಾಂಕಗಳನ್ನು ಸಾರ್ವಜನಿಕರಿಗೆ ಪ್ರಚುರಪಡಿಸಿ, ಯೋಜನೆಯ ಅನುಷ್ಠಾನ ಮತ್ತು ಪ್ರಗತಿಗೆ ಒತ್ತು ಕೊಡಬೇಕು ಎಂದು ಸೂಚಿಸಿದರು.
ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ಪೌತಿ ವಾರಸಾ ರಿತ್ಯ ಮಾಲೀಕತ್ವವು ಮೃತರ ಉತ್ತರಾಧಿಕಾರಿಗಳ ಹೆಸರಿಗೆ ಬದಲಾವಣೆಯಾಗದಿದ್ದಲ್ಲಿ ಅಂತಹ ಜಮೀನುಗಳ ಸ್ವಾಧೀನವನ್ನು ಹೊಂದಿದ್ದರೂ ಸಹ ಕುಟುಂಬಸ್ಥರಿಗೆ ಜಮೀನು ಅಭಿವೃದ್ಧಿಪಡಿಸಲು ಸಾಲ ಸೌಕರ್ಯಗಳು ದೊರೆಯುವುದಿಲ್ಲ. ಪಕೃತಿ ವಿಕೋಪದಂತಹ ಅಚಾತುರ್ಯಗಳಿಂದಾಗಿ ಫಸಲು ನಾಶವಾದಾಗ ಸರ್ಕಾರದಿಂದ ನೀಡಲಾಗುವ ವಿಮೆ ಪರಿಹಾರದ ಮೊಬಲಗನ್ನು ಪಡೆಯುವುದು ದುಸ್ತರವಾಗುತ್ತದೆ. ಅಲ್ಲದೇ ಇಂತಹ ಜಮೀನುಗಳನ್ನು ಸಾರ್ವಜನಿಕ ಉದ್ದೇಶಕ್ಕೆ ಭೂಸ್ವಾಧೀನ ಕಾಯಿದೆಯಂತೆ ವಶಪಡಿಸಿಕೊಂಡಾಗಲೂ ಸಹ ಪರಿಹಾರದ ಹಣವನ್ನು ಪಡೆಯಲು ವಿವಿಧ ಕಚೇರಿಗಳಿಗೆ ಅಲೇದಾಡಬೇಕಾದ ಪರಿಸ್ಥಿತಿ ಇರುವುದು ಕಂದಾಯ ಇಲಾಖೆಯ ಗಮನಕ್ಕೆ ಬಂದಿದೆ. ಇದು ತಪ್ಪಬೇಕು. ರೈತಾಪಿ ವರ್ಗದವರ ಸಮಸ್ಯೆಗಳನ್ನು ಪರಿಹರಿಸಿ ಪೌತಿ ವಾರಸಾ ಸ್ವರೂಪದ ಮ್ಯುಟೇಶನ್ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಿ ಪೌತಿ ವಾರಸಾ ಖಾತೆ ಆಂದೋಲನವನ್ನು ಕಂದಾಯ ಇಲಾಖೆಯು ತಿಳಿಸಿದ ಮಾರ್ಗಸೂಚಿಯಂತೆ ನಡೆಸಲು ಕ್ರಮ ವಹಿಸಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಎಲ್ಲ ತಹಸೀಲ್ದಾರರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬೀದರ ಸಹಾಯಕ ಆಯುಕ್ತರಾದ ಗರೀಮಾ ಪನ್ವಾರ, ಬೀದರ ತಹಸೀಲ್ದಾರ ಗಂಗಾದೇವಿ ಹಾಗೂ ವಿವಿಧ ತಾಲೂಕುಗಳ ತಹಸೀಲ್ದಾರರು ಇದ್ದರು.





No comments:
Post a Comment