ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆ
ಬೀದರ ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ):-ಜಿಲ್ಲೆಯಲ್ಲಿ ಅಕ್ಟೋಬರ್ 4ರಂದು ನಡೆಯಲಿರುವ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆಯು ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರ ಅಧ್ಯಕ್ಷತೆಯಲ್ಲಿ ಸೆ.30ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಕೋವಿಡ್-19 ಸಂದರ್ಭದಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯಿಂದ ಪರೀಕ್ಷೆಗಳು ನಡೆಯುವ ವ್ಯವಸ್ಥೆ ಮಾಡಬೇಕು. ಯಾವುದೇ ರೀತಿಯ ಅವ್ಯವಹಾರಕ್ಕೆ ಅವಕಾಶವಿಲ್ಲದ ಹಾಗೆ ಪರೀಕ್ಷೆಗಳು ಪಾರದರ್ಶಕತೆಯಿಂದ ನಡೆಯುವಂತೆ ನೋಡಿಕೊಳ್ಳಲು ಇದೆ ವೇಳೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಶಿಕ್ಷಕರ ಅರ್ಹತಾ ಪರೀಕ್ಷೆಯು ಅಕ್ಟೋಬರ್ 4ರಂದು ಬೀದರ ಜಿಲ್ಲೆಯ 25 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರಿ ಉಪ ನಿರ್ದೇಶಕರಾದ ಇನಾಯತ್ ಅಲಿ ಶಿಂಧೆ ಅವರು ಸಭೆಗೆ ಮಾಹಿತಿ ನೀಡಿದರು.ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಜೇಶನ್ ವ್ಯವಸ್ಥೆ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ ನಡೆಸುವ ವೇಳೆ ಯಾರಿಗಾದರು ಕೋವಿಡ್-19 ಲಕ್ಷಣಗಳು ಕಂಡು ಬಂದರೆ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಮತ್ತು ಸಂಬAಧಿಸಿದ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ 25 ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಸ್ಥಳೀಯ ಜಾಗೃತ ದಳದವರು ಮತ್ತು ಮಾರ್ಗಾಧಿಕಾರಿಗಳು ಇದ್ದರು.





No comments:
Post a Comment