ವಿವಿಧ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಸ್ವಾಧಾರ ಕೇಂದ್ರಕ್ಕೆ ಆಕಸ್ಮಿಕ ಭೇಟಿ ನೀಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ - EYLAAPH E MEDIA

EYLAAPH E MEDIA

EYLAAPH EMEDIA PVT LTD. IS DELIVERING COMMON NEWS TO THE WORLD THROUGH IT'S REPORTERS , NEWS WHICH CONTAINS REALITY. TRUTH WHICH OTHERS NEVER COVER, PLEASE SHARE OUR CHANNEL AND MAKE IT SUBSCRIBED IN YOUR MOBILE TO GET UPDATED ON EVERY NEWS FROM EYLAAPH NEWS.

Eylaaph Breaking update

Post Top Ad

Post Top Ad

Weather

Translate

Friday, February 7, 2025

ವಿವಿಧ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಸ್ವಾಧಾರ ಕೇಂದ್ರಕ್ಕೆ ಆಕಸ್ಮಿಕ ಭೇಟಿ ನೀಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ವಿವಿಧ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಸ್ವಾಧಾರ ಕೇಂದ್ರಕ್ಕೆ
ಆಕಸ್ಮಿಕ ಭೇಟಿ ನೀಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ (ಕರ್ನಾಟಕ ವಾರ್ತೆ) ಫೆಬ್ರುವರಿ.07:2025 ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಇಂದು ಬೀದರ ನಗರ ಹಾಗೂ ತಾಲ್ಲೂಕಿನ ವಿವಿಧ ಅಂಗನವಾಡಿ ಕೇಂದ್ರ ಮತ್ತು ಕಿತ್ತೂರು ರಾಣಿ, ಮಹಿಳಾ ಮಂಡಳ ಸ್ವಯಂ ಸೇವಾ ಸಂಸ್ಥೆ ಮುಖಾಂತರ ಕಾರ್ಯನಿರ್ವಹಿಸುತ್ತಿರುವ ಸ್ವಾಧಾರ ಕೇಂದ್ರಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅವರು ಬೀದರ ನಗರದ ನಯಾಕಮಾನ ಅಂಗನವಾಡಿ ಕೇಂದ್ರದ ವ್ಯಾಪ್ತಿಯಲ್ಲಿನ ಫಲಾನುಭವಿಯ ಮನೆ ಭೇಟಿ ನೀಡಿ ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆಯ ಕುರಿತು ಪ್ರೋತ್ಸಾಹಧನ ತಲುಪಿರುವ ಬಗ್ಗೆ ಪರಿಶೀಲನೆ ಮಾಡಿದರು ಹಾಗೂ ಸದರಿ ಯೋಜನೆಯ ಕುರಿತು ಫಲಾನುಭವಿಗಳೊಂದಿಗೆ ಚರ್ಚಿಸಿದರು. ಅದೇ ರೀತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜನನಿ ಸುರಕ್ಷ ಯೋಜನೆ, ಚುಚ್ಚು ಮದ್ದಿನ ನೀಡಿರುವ ಕುರಿತು ಮಕ್ಕಳನ್ನು ಪರಿಕ್ಷಿಸಿದರು.ಬೀದರ ನಗರ ಚೀಮಕೋರಗಲ್ಲಿ ಅಂಗನವಾಡಿ ಕೇಂದ್ರದಲ್ಲಿನ ಮಕ್ಕಳೊಂದಿಗೆ ತುಸು ಕಾಲ ಸಮಯ ಕಳೆದರು. ಕೇಂದ್ರದಲ್ಲಿ ಅಳವಡಿಸಿರುವ ವಿವಿಧ ಚಾರ್ಟಗಳನ್ನು ಮಕ್ಕಳಿಗೆ ತೋರಿಸಿ ಹೆಸರು ಹೇಳಲು ಸೂಚಿಸಿದಾಗ ಮಕ್ಕಳು ಅವುಗಳ ಹೆಸರು ಹೇಳಿದರು.

 ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಯೋಜನೆ ಪೋಷಣ ಟ್ರಾಕರ್ ದಾಖಲಾತಿ ಹಾಗೂ ತೂಕ, ಎತ್ತರ ಪರಿಶೀಲನೆ ಹಾಗೂ ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ನೀಡುವ ಉಪಾಹಾರ ಮತ್ತು ಕೋಳಿ ಮೊಟ್ಟೆಗಳನ್ನು ನೀಡಿರುವ ಬಗ್ಗೆ ಪರಿಶೀಲನೆ ಮಾಡಿದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀಧರ ಅವರು ಅಂಗನವಾಡಿಗಲ್ಲಿನ ಚಟುವಟಿಕೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವಿವರಿಸಿದರು.ಬೀದರ ತಾಲ್ಲೂಕಿನಲ್ಲಿ 11,476 ಗರ್ಭೀಣಿಯರು ನೋಂದಣಿ ಮಾಡಿಕೊಂಡಿದ್ದು, ಇವರೆಲ್ಲರೂ ತಾಯಿ ಕಾರ್ಡು ಪಡೆದುಕೊಂಡಿರುವುದರ ಬಗ್ಗೆ ಹಾಗೂ ಮಕ್ಕಳಿಗೆ ಚುಚ್ಚು ಮದ್ದು ನೀಡಿರುವ ಬಗ್ಗೆ ಪರಿಶೀಲನೆ ಮಾಡಿ ಎಲ್ಲ ಗರ್ಭೀಣಿಯರಿಗೆ ತಾಯಿ ಕಾರ್ಡು ಸಿಗುವಂತೆ ಹಾಗೂ  ಚಿಕಿತ್ಸೆ ವಿವರಗಳನ್ನು ತಾಯಿ ಕಾರ್ಡನಲ್ಲಿ ಕಡ್ಡಾಯವಾಗಿ ನಮೂದಿಸುವಂತೆ ತಾಲ್ಲೂಕಾ ಆರೋಗ್ಯ ಅಧಿಕಾರಿ ಸಂಗಾರೆಡ್ಡಿ ಅವರಿಗೆ ಸೂಚನೆ ನೀಡಿದರು.ಬೀದರ ತಾಲ್ಲೂಕಿನಲ್ಲಿ ಕಿತ್ತೂರು ರಾಣಿ, ಮಹಿಳಾ ಮಂಡಳ, ಸ್ವಯಂ ಸೇವಾ ಸಂಸ್ಥೆ ಮುಖಾಂತರ ಕಾರ್ಯನಿರ್ವಹಿಸುತ್ತಿರುವ ಸ್ವಾಧಾರ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಫಲಾನುಭವಿಗಳ ಜೊತೆ ಸಂವಾದ ನಡೆಸಿ ಕೇಂದ್ರದಲ್ಲಿ ನೀಡುತ್ತಿರುವ ಸೌಕರ್ಯಗಳ ಕುರಿತು ಚರ್ಚಿಸಿದರು. ಹಾಗೂ ಹೊಲಿಗೆ ಯಂತ್ರ ತರಬೇತಿ ಪಡೆದ ಸಂಗೀತಾ ಎಂಬ ಫಲಾನುಭವಿಯ ಮನೆ ಭೇಟಿ ನೀಡಿ ಪರಿಶೀಲಿಸಿದರು.ಜನನಿ ಸುರಕ್ಷಾ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಿಂದ ಯಾವುದೇ ಫಲಾನುಭವಿಯು ಹೊರಗುಳಿಯದಂತೆ ನೋಡಿಕೊಳ್ಳುವಂತೆ ಉಪಸ್ಥಿತರಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರ ಸಭೆ ಸಿಬ್ಬಂದಿಗಳಿಗೆ ನಗರ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಹೆಚ್ಚು ಗಮನ ಹರಿಸುವಂತೆ ಸೂಚನೆ ನೀಡಿದರು.

(EYLAAPH NEWS)

No comments:

Post Top Ad