Post Top Ad
Weather
Translate
Wednesday, April 9, 2025
ಯುಜಿಸಿ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಲು ಅಧಿಕಾರಿಗಳಿಗೆ ಸೂಚನೆ-ಜಿಲ್ಲಾದಿಕಾರಿ ಶಿಲ್ಪಾ ಶರ್ಮಾ
ಯುಜಿಸಿ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಲು ಅಧಿಕಾರಿಗಳಿಗೆ ಸೂಚನೆ-ಜಿಲ್ಲಾದಿಕಾರಿ ಶಿಲ್ಪಾ ಶರ್ಮಾ
ಬೀದರ (ಕರ್ನಾಟಕ ವಾರ್ತೆ)(Eylaaph News)ಏಪ್ರಿಲ್.8: ಏಪ್ರಿಲ್.16 ಹಾಗೂ 17 ರಂದು ನಡೆಯಲಿರುವ ಯುಜಿಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಲು ಅಧಿಕಾರಿಗಳಿಗೆ ಜಿಲ್ಲಾದಿಕಾರಿ ಶಿಲ್ಪಾ ಶರ್ಮಾ ಸೂಚನೆ ನೀಡಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2025ನೇ ಸಾಲಿನ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ) ಗಳನ್ನು ಸುವ್ಯವಸ್ಥಿತವಾಗಿ ನಡೆಸುವ ಹಿನ್ನಲೆಯಲ್ಲಿ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆ ಉದ್ದೇಶಿಸಿ ಮಾತನಾಡಿದರು.
ಬೀದರ ಜಿಲ್ಲೆಯಲ್ಲಿ ಒಟ್ಟು 36 ಪರೀಕ್ಷಾ ಕೇಂದ್ರಗಳಿರಲಿದ್ದು ಬೀದರ, ಬಸವಕಲ್ಯಾಣ, ಭಾಲ್ಕಿ ನಗರಗಳಲ್ಲಿ ಪರೀಕ್ಷೆ ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದAತೆ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಪ್ರತಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ಸ್ಕಾನಿಂಗ್, ಜೆರಾಕ್ಸ್, ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಬಂದ್ ಮಾಡಲು ಆದೇಶಿಸಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಈ ಪರೀಕ್ಷೆಗಳು ನಡೆಯಲಿವೆ. ಕೆಇಎ ಆದೇಶಿಸಿರುವ ವಸ್ತ್ರ ಸಂಹಿತೆಯನ್ನು ಕಡ್ಡಾಯ ಪಾಲಿಸಬೇಕು ಎಂದು ತಿಳಿಸಿದರು.
ಈ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಚಂದ್ರಕಾAತ ಪೂಜಾರ, ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ ಸುರೇಖಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಕಾAತ ಶಹಾಬಾದಕರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು .
Tags
# Kannada
About Eylaaph Media/Eylaaph News
Kannada
Labels:
Kannada
Subscribe to:
Post Comments (Atom)

No comments:
Post a Comment